-->
ಕಾರು- ಲಾರಿ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

ಕಾರು- ಲಾರಿ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ


ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 


ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article