ಉಡುಪಿ ರಾಜಾಂಗಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧನ ರಕ್ಷಣೆ
Monday, April 06, 2026
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿ, ಸೊಂಟದ ಸ್ವಾಧೀನ ಕಳೆದುಕೊಂಡು, ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರೊಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸವಿತಾ ಎನ್ನುವರ ಸಹಕಾರದಿಂದ ರಕ್ಷಿಸಿದ್ದಾರೆ.
ವೃದ್ಧರನ್ನು ಚೆನ್ನಗಿರಿ ನಿವಾಸಿ ರುದ್ರಪ್ಪ(70) ಎಂದು ಗುರುತಿಸಲಾಗಿದೆ. ಇವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ವಾರಿಸುದಾರರು ಯಾರಾದರೂ ಇದ್ದಲ್ಲಿ ತುರ್ತಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.