-->
ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕ ಆತ್ಮಹತ್ಯೆ


ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. 

ನೆಕ್ಕರೆಕಾಡು ನಿವಾಸಿ ರಮೇಶ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ವಿಟ್ಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article