-->
 ತ್ರಾಸಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಹಲವರು ಗಂಭೀರ

ತ್ರಾಸಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಹಲವರು ಗಂಭೀರ


ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಪ್ರವಾಸಿಗರಿದ್ದ ಮಿನಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಅಪರಾಹ್ನ ನಡೆದಿದೆ. 


ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿಗಳು ಮಿನಿ ಬಸ್ ನಲ್ಲಿ ಕರಾವಳಿಗೆ ಪ್ರವಾಸಕ್ಕೆಂದು ಬಂದಿದ್ದರು. ಅತಿ ವೇಗದಿಂದ ಬಂದ ಮಿನಿ ಬಸ್ ತ್ರಾಸಿ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಶಂಕರಘಟ್ಟ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಸೇರಿ ಮಿನಿ ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 


Ads on article

Advertise in articles 1

advertising articles 2

Advertise under the article