ತೊಟ್ಟಂ ಚರ್ಚಿನಲ್ಲಿ ಪವಿತ್ರ ಗುರುವಾರ ಆಚರಣೆ
Thursday, April 02, 2026
ಉಡುಪಿಯ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಗುರುವಾರವನ್ನು ವಿಶಿಷ್ಠವಾಗಿ ಆಚರಿಸಲಾಯಿತು.
ಉಡುಪಿ ಧರ್ಮಪ್ರಾಂತ್ಯದಲ್ಲಿ ಪ್ರಸ್ತುತ ವರ್ಷವನ್ನು ಬಡವರ ವರ್ಷವಾಗಿ ಆಚರಿಸಲಾಗುತ್ತಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯ 12 ಮಂದಿ ವಿಶಿಷ್ಠ ವ್ಯಕ್ತಿಗಳನ್ನು ಗುರುತಿಸಿ ಅವರ ಪಾದಗಳನ್ನು ಚರ್ಚಿನ ಧರ್ಮಗುರುಗಳಾದ ಡೆನಿಸ್ ಡೆಸಾ ಅವರು ತೊಳೆದು ಯೇಸು ತೋರಿದ ಸರಳತೆಯ ಸಂದೇಶವನ್ನು ಸ್ಮರಿಸಿದರು.
ಈ ವೇಳೆ ಸ್ಥಳೀಯ ಕಾನ್ವೆಂಟಿನ ಸುಪಿರೀಯರ್ ಸಿಸ್ಟರ್ ಸುಷ್ಮಾ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಲೆಸ್ಲಿ ಆರೋಝಾ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಲವೀನಾ ಫರ್ನಾಂಡಿಸ್, 20 ಆಯೋಗಗಳ ಸಂಚಾಲಕಿ ಶಾಂತಿ ಫರ್ನಾಂಡಿಸ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು
