-->
ವೇದಿಕೆಯಲ್ಲೇ ಕುಸಿದು ಬಿದ್ದು ನಿರೂಪಕ ಸಾವು

ವೇದಿಕೆಯಲ್ಲೇ ಕುಸಿದು ಬಿದ್ದು ನಿರೂಪಕ ಸಾವು


ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ನಿರೂಪಕರೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಏಪ್ರಿಲ್ 10ರಂದು ರಾತ್ರಿ ನಡೆದಿದೆ. 

ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿತ್ (32) ಮೃತಪಟ್ಟ ದುರ್ದೈವಿ. ಇವರು ಉತ್ತಮ ನಿರೂಪಕರಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ತನ್ನ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ಅವರಿಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿತ್ತು. ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಅವರು ಅತ್ಯಂತ ಉತ್ಸಾಹದಿಂದ ವೇದಿಕೆ ಏರಿ ಕಾರ್ಯಕ್ರಮದ ಮುನ್ನುಡಿ ಬರೆಯುತ್ತಿದ್ದರು. ಆದರೆ, ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅವರು ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. 


Ads on article

Advertise in articles 1

advertising articles 2

Advertise under the article