ಗಾಳಿ ಮಳೆಗೆ ಮರ ಬಿದ್ದು ಮನೆಗಳಿಗೆ ಹಾನಿ, ದ್ವಿಚಕ್ರ ವಾಹನಗಳು ಜಖಂ
Wednesday, April 22, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸುರಿದ ಭಾರೀ ಮಳೆ ಹಾಗೂ ಗಾಳಿಯಿಂದ ಕೆಲವೆಡೆ ಹಾನಿ ಉಂಟಾಗಿದೆ.
ಮಂಗಳೂರಿನ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥಕಟ್ಟೆಯಲ್ಲಿದ್ದ ಬೃಹತ್ ಗಾತ್ರದ ಮರದ ಗೆಲ್ಲು ಮುರಿದು 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಅಲ್ಲದೇ ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಮರ ಬಿದ್ದ ಪರಿಣಾ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಮರ ತೆರವು ಕಾರ್ಯಾಚರಣೆ ನಡೆಸಲಾಯಿತು.

