ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ
Monday, April 06, 2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು.