-->
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ



ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟಿಸಿದೆ.

ಉಡುಪಿ ಜಿಲ್ಲೆ (ಶೇ. 93.90 ರಷ್ಟು ಫಲಿತಾಂಶ) ಪ್ರಥಮ ಸ್ಥಾನ ಪಡೆದರೆ ದ್ವಿತೀಯ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಪಾಲಾಗಿದೆ. ಯಾದಗಿರಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದಾಗಿದೆ. ಇದರ ಜೊತೆಗೆ, ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಾಗಿದೆ. ಫಲಿತಾಂಶ ವೀಕ್ಷಿಸಲು ಅಧಿಕೃತ https://karresults.nic.in ನೀಡಬಹುದು.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿತ್ತು. 5174 ಕಾಲೇಜುಗಳಿಂದ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಈ ಪೈಕಿ, ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.


ಫಲಿತಾಂಶ ವೀಕ್ಷಿಸುವ ವಿಧಾನ


ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https:// karresults.nic.in ಗೆ ಭೇಟಿ ನೀಡಬಹುದು

Ads on article

Advertise in articles 1

advertising articles 2

Advertise under the article