-->
ರೌಡಿ ಶೀಟರ್ ಸೋಮನಾಥ್ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಆದೇಶ

ರೌಡಿ ಶೀಟರ್ ಸೋಮನಾಥ್ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಆದೇಶ


ಕಾರ್ಕಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ತೆಳ್ಳಾರು ರಸ್ತೆಯ ಕುಂಬ್ರಪದವು ನಿವಾಸಿ ರೌಡಿ ಶೀಟರ್ ಸೋಮನಾಥ ಯಾನೆ ಸೋಮು(40)ನನ್ನು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಈತನ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ದಿನಾಂಕ 30.04.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.ಈತನ ವಿರುದ್ಧ 11 ಪ್ರಕರಣ ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಈತನನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article