ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ರೂಮಿನಲ್ಲಿ ಮಲಗಿದ್ದಲ್ಲೇ ಮೃತ್ಯು
Wednesday, April 22, 2026
ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್.(37) ಎಂದು ಗುರುತಿಸಲಾಗಿದೆ. ಇವರು ಸುಮಾರು 4 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎ.19ರಂದು ಸಂಜೆ ಸ್ನೇಹಿತರೊಂದಿಗೆ ಮಲ್ಪೆಗೆ ಪ್ರವಾಸಕ್ಕೆ ಬಂದು ರೂಮಿನಲ್ಲಿ ಮಲಗಿದ್ದರು. ಎ.20ರಂದು ಮಧ್ಯಾಹ್ನ ಮಲಗಿದ್ದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.