-->
ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ರೂಮಿನಲ್ಲಿ ಮಲಗಿದ್ದಲ್ಲೇ ಮೃತ್ಯು

ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ರೂಮಿನಲ್ಲಿ ಮಲಗಿದ್ದಲ್ಲೇ ಮೃತ್ಯು


ಮಲ್ಪೆಗೆ 
ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್.(37) ಎಂದು ಗುರುತಿಸಲಾಗಿದೆ. ಇವರು ಸುಮಾರು 4 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎ.19ರಂದು ಸಂಜೆ ಸ್ನೇಹಿತರೊಂದಿಗೆ ಮಲ್ಪೆಗೆ ಪ್ರವಾಸಕ್ಕೆ ಬಂದು ರೂಮಿನಲ್ಲಿ ಮಲಗಿದ್ದರು. ಎ.20ರಂದು ಮಧ್ಯಾಹ್ನ ಮಲಗಿದ್ದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article