-->
ಆಟೋ ರಿಕ್ಷಾದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

ಆಟೋ ರಿಕ್ಷಾದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ


ಆಟೋ ರಿಕ್ಷಾವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. 

ಬಾಂಬಿಲ ನಿವಾಸಿ ರೇವಣ್ಣ ಎಂಬುವವರು ತಮ್ಮ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.  ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾದ ಕಾರಣ, ಪೆಟ್ರೋಲ್ ತುಂಬಿಸಲು ಹೋಗುತ್ತಿದ್ದ ವೇಳೆ ಚಾಲನೆಯಲ್ಲಿದ್ದಾಗಲೇ ಗ್ಯಾಸ್ ಸೋರಿಕೆಯಾದಂತೆ ವಾಸನೆ ಬಂದಿದ್ದು, ಕೂಡಲೇ ಎಚ್ಚೆತ್ತ ಚಾಲಕ ರೇವಣ್ಣ ಅವರು ರಿಕ್ಷಾವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಚಾಲಕ ರಿಕ್ಷಾದಿಂದ ಕೆಳಗಿಳಿಯುತ್ತಿದ್ದಂತೆ ಬೆಂಕಿ ಆವರಿಸಿದ್ದು, ಕೆಲವೇ ಕ್ಷಣಗಳಲ್ಲಿ ವಾಹನವು ಹೊತ್ತಿ ಉರಿದಿದೆ. ಅದೃಷ್ಟವಶಾತ್ ರಿಕ್ಷಾದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಅನಾಹುತ ತಪ್ಪಿದೆ.  ಆಟೋ ರಿಕ್ಷಾ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article