ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಗಂಭೀರ ಗಾಯ
Wednesday, April 01, 2026
ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.
ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಕೃಷ್ಣ ಶ್ಯಾಮ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದಿದೆ.
ಗಾಯಾಳು ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.