ವಾರೀಸುದಾರರಿಲ್ಲದ ಅಪರಿಚಿತ ಶವದ ಅಂತ್ಯಸಂಸ್ಕಾರ
Tuesday, April 14, 2026
ಕಳೆದ ಒಂದು ತಿಂಗಳಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ದಫನ ನಡೆಸಲಾಯಿತು.
ಕುಂದಾಪುರ ಗ್ರಾಮಾಂತರ ಆರಕ್ಷಕ ಠಾಣಾ ವ್ಯಾಪ್ತಿಗೆ ಬರುವ ಹಟ್ಟಿಯಂಗಡಿ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವೃದ್ಧರೊಬ್ಬರು ಗಂಭೀರ ಸ್ಥಿತಿಯಲ್ಲಿದ್ದರು. ಅಲ್ಲಿಂದ ವೃದ್ಧರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವೃದ್ಧರು ಮೃತಪಟ್ಟಿದ್ದರು. ವಾರಸುದಾರರ ಬರುವಿಕೆಗಾಗಿ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು.
ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಜಿಲ್ಲಾಸ್ಪತ್ರೆಯ ವೈದ್ಯ ಡಾ. ಸುಜಿತ್ ನಡೆಸಿದರು. ಗ್ರಾಮಾಂತರ ಪೋಲಿಸ್ ಠಾಣೆಯ ಎ.ಎಸ್.ಐ ಉಮೇಶ್ ನಾಯಕ್, ಸಿಬ್ಬಂದಿ ವಿಜಯಲಕ್ಷ್ಮೀ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತ್ರತ್ವದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಹಟ್ಟಿಯಂಗಡಿ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇಣುಕಾ ಹೆಗ್ಡೆ, ಪಂಚಾಯತ್ ಕಾರ್ಯದರ್ಶಿ ಕೃಷ್ಣ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಚಂದ್ರ ಮೊಗವೀರ ಸ್ಥಳದಲ್ಲಿದ್ದರು. ಫ್ಲವರ್ ವಿಷ್ಣು ಹಾಗೂ ನಗರಾಡಳಿತ, ಜಿಲ್ಲಾಸ್ಪತ್ರೆ ಸಹಕರಿಸಿದೆ.