-->
ಕಾಂಗ್ರೆಸ್ ಹಿರಿಯ ನಾಯಕಿ ಮೊಹ್ಸಿನಾ ಕಿದ್ವಾಯಿ ನಿಧನ

ಕಾಂಗ್ರೆಸ್ ಹಿರಿಯ ನಾಯಕಿ ಮೊಹ್ಸಿನಾ ಕಿದ್ವಾಯಿ ನಿಧನ


ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ನಿಧನರಾಗಿದ್ದಾರೆ.  

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ ಮೊಹ್ಸಿನಾ ಕಿದ್ವಾಯಿ ಅವರು, ಬುಧವಾರ ಬೆಳಿಗ್ಗೆ ನೋಯ್ಡಾದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಝಾಮುದ್ದೀನ್‌ನಲ್ಲಿರುವ ದಫನ ಭೂಮಿಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.


ಉತ್ತರ ಪ್ರದೇಶದ ಬಾರಾಬಂಕಿ ಮೂಲದ ಮೊಹ್ಸಿನಾ ಕಿದ್ವಾಯಿ ಅವರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು. ಅವರು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು. ಕಿದ್ವಾಯಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೊಹ್ಸಿನಾ ಕಿದ್ವಾಯಿ ಅವರು, ಭಾರತೀಯ ರಾಜಕಾರಣದ ಪ್ರಮುಖ ಮಹಿಳಾ ನಾಯಕರಲ್ಲಿ ಒಬ್ಬರಾಗಿದ್ದರು. 

Ads on article

Advertise in articles 1

advertising articles 2

Advertise under the article