-->
ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ: ಬಾಲಕಿ ದುರ್ಮರಣ

ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿಕ್ಕಿ: ಬಾಲಕಿ ದುರ್ಮರಣ


ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾಗಿ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. 


ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ  ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ.

ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article