-->
ಉಡುಪಿ ಜಟ್ಕಾಸ್ಟ್ಯಾಂಡ್ ಬಳಿ ರಸ್ತೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಉಡುಪಿ ಜಟ್ಕಾಸ್ಟ್ಯಾಂಡ್ ಬಳಿ ರಸ್ತೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ


ಇಂದು ಉಡುಪಿ ನಗರದ  ಹಳೆ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಗಾತ್ರದ ಮರವೊಂದು ಮುಖ್ಯ ರಸ್ತೆಗೆ ಉರುಳಿ ಬಿದ್ದಿದೆ.  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. 

ಉಡುಪಿ ನಗರದೆಲ್ಲೆಡೆ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಿ ಎಂಬ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಒಂದೊಂದೇ ಮರಗಳು ಉರುಳಿ ಬೀಳುತ್ತಿವೆ.  ಇಂದು ಹಲವು ವಾಹನಗಳು ಸಂಚರಿಸುವ ಜನಸಂದಣಿ ಇರುವ ಹಳೆ ಜಟ್ಕಾ ಸ್ಟ್ಯಾಂಡ್ ಬಳಿ ಏಕಾಏಕಿ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಅಲ್ಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳೀಯರೆಲ್ಲಾ ಸೇರಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಉಡುಪಿ ನಗರದ ಕೆಲವೆಡೆ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ ಎಂದು ಸಾರ್ವಜನಿಕರು ನಗರಸಭೆಯನ್ನು ಒತ್ತಾಯಿಸುತ್ತಲೇ ಬರುತ್ತಿದ್ದಾರೆ, ಆದರೆ ಮಳೆಗಾಲಕ್ಕೆ ಇನ್ನೊಂದೇ ತಿಂಗಳು ಬಾಕಿ ಇದ್ದರೂ ಅಪಾಯಕಾರಿ ಮರಗಳನ್ನು ತೆರವು ಮಾಡುವ ಕೆಲಸಕಾರ್ಯ ಮಾತ್ರ ವಿಳಂಬವಾಗುತ್ತಿದೆ. ಇದೀಗ ಮರಗಳು ರಸ್ತೆಗೆ ಉರುಳಿ ಬೀಳುತ್ತಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಲಿ. ಎಲ್ಲೆಲ್ಲಿ ಅಪಾಯಕಾರಿ ಮರಗಳಿವೆ ಎನ್ನುವ ಬಗ್ಗೆ ಮಾಹಿತಿ ಪಡೆದು ಅದನ್ನು ತೆರವುಗೊಳಿಸಲಿ ಎನ್ನುವ ಆಗ್ರಹ ವ್ಯಕ್ತವಾಗಿದೆ. 








Ads on article

Advertise in articles 1

advertising articles 2

Advertise under the article