-->
 ಎನ್‌ಡಿಪಿಎಸ್ ಪ್ರಕರಣದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ

ಎನ್‌ಡಿಪಿಎಸ್ ಪ್ರಕರಣದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ


ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ಮಲ್ಪೆ ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಉಡುಪಿ ತಾಲೂಕಿನ ಕೆಮ್ಮಣ್ಣು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಪ್ಪ ಅವರ ನೇತೃತ್ವದಲ್ಲಿ ಎನ್‌ಡಿಪಿಎಸ್ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿ ಸದಾಫ್ ಜಿ. ಮೊಹಮ್ಮದ್ ತನ್ನ ಮನೆಯಲ್ಲಿ ಇರುವುದಾಗಿ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಬೆಳಿಗ್ಗೆ ಸುಮಾರು 9:30ರ ಸುಮಾರಿಗೆ ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಸೇತುವೆ ಸಮೀಪದ ಮನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಮನೆಯ ಟೆರೆಸ್‌ನಿಂದ ಪಕ್ಕದ ಶೆಡ್ ಮೇಲ್ಟಾವಣೆಗೆ ಹಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಸ್ಥಳೀಯರ ಮಾಹಿತಿಯಂತೆ, ಆರೋಪಿ ಹಿಂದಿನ ರಾತ್ರಿ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಮನೆಗೆ ಬಂದಿದ್ದಾನೆ ಎಂದು ತಿಳಿದುಬಂದಿದೆ. ಪರಿಶೀಲನೆ ಮುಂದುವರಿಸಿದ ಪೊಲೀಸರು, ಆರೋಪಿತನ ಮನೆಯ ಸಮೀಪದ ತೆಂಗಿನ ತೋಟದಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಎರಡು ಕಾರುಗಳನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ಹುಂಡೈ ಐ ಟ್ವಿಂಟಿ ಕಾರಿಗೆ ಮಾರುತಿ ಸುಜುಕಿ ಬಲೆನೋ ನಂಬರಿನ ಫಲಕ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಜೊತೆಗೆ ನೀಲಿ ಬಣ್ಣದ ಹೊಂಡಾ ಸಿಟಿ ಕಾರು ಮೇಲೂ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

Ads on article

Advertise in articles 1

advertising articles 2

Advertise under the article