-->
ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಕುಸಿದು ಬಿದ್ದು ನಿಧನ

ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಕುಸಿದು ಬಿದ್ದು ನಿಧನ


ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.

ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಏಕಾಏಕಿಯಾಗಿ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬ್ರೈನ್ ಹೆಮರೇಜ್ ತುತ್ತಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ನರು ಮಕ್ಕಳನ್ನು ‌ಅಗಲಿದ್ದಾರೆ. 

Ads on article

Advertise in articles 1

advertising articles 2

Advertise under the article