-->
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಭೇಟಿ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಭೇಟಿ


ಬ್ರಹ್ಮಕಲಶೋತ್ಸವದ ಸಿದ್ದತೆಯಲ್ಲಿರುವ ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಭೇಟಿ ನೀಡಿ, ದೇವರ ದರ್ಶನ ಪಡೆದರು. 


ಈ ವೇಳೆ ದೇವಸ್ಥಾನದ ಅರ್ಚಕ ಮಧುಸೂದನ್ ಉಪಾಧ್ಯಾಯ ಪ್ರಸಾದ ನೀಡಿದರು. ಬಳಿಕ ದೇವಳದ ವತಿಯಿಂದ ಭೋಜೇಗೌಡ ಅವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ಧಾರ್ಮಿಕ ಕಾರ್ಯಕ್ಕೆ 5 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ಮೊದಲಾದವರು ಉಪಸ್ಥಿತರಿದ್ದರು.





Ads on article

Advertise in articles 1

advertising articles 2

Advertise under the article