-->
ಕೇಂದ್ರ ಸರ್ಕಾರದ ಕ್ಷೇತ್ರ ಮರು ವಿಂಗಡನೆ ಮಸೂದೆ ವಿರುದ್ಧ  ಕಾಂಗ್ರೆಸ್ ಧರಣಿ

ಕೇಂದ್ರ ಸರ್ಕಾರದ ಕ್ಷೇತ್ರ ಮರು ವಿಂಗಡನೆ ಮಸೂದೆ ವಿರುದ್ಧ ಕಾಂಗ್ರೆಸ್ ಧರಣಿ


ಕೇಂದ್ರ ಸರ್ಕಾರದ ಕ್ಷೇತ್ರ ಮರು ವಿಂಗಡನೆ ಮಸೂದೆ ವಿರುದ್ಧ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. 


ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್ ನಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 

ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಇಟ್ಟುಕೊಂಡು ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸಲು ಎಲ್ಲ ತಯಾರಿ ನಡೆಸಿತ್ತು. ಆದರೆ ವಿರೋಧ ಪಕ್ಷಗಳು ಆ ಮಸೂದೆಯನ್ನು ಸೋಲಿಸಿವೆ. 2023 ರಲ್ಲೇ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬಂದಿದೆ. ಆದರೆ ಅದನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿಲ್ಲ. ಈಗ ಆ ಮಸೂದೆಯನ್ನು ಮುಂದಿಟ್ಟು ಅವೈಜ್ಞಾನಿಕ ರೀತಿಯಲ್ಲಿ ಕ್ಷೇತ್ರ ಮರವಿಂಗಡನೆಗೆ ಹೊರಟಿದೆ. ಇದನ್ನು ಕಾಂಗ್ರೆಸ್ ಪಕ್ಷ ಸಹಿತ ಎಲ್ಲ ವಿರೋಧ ಪಕ್ಷಗಳು ವಿರೋಧಿಸುತ್ತಿವೆ. ಕೇಂದ್ರ ಸರ್ಕಾರವು ಇವತ್ತು ಮಹಿಳಾಪರ ಎಂದು ಹೇಳುತ್ತಿದೆ. ಆದರೆ ಮೊದಲ  ಮಹಿಳಾ ಪ್ರಧಾನಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿದ ಹೆಗ್ಗಳಿಗೆ ಕಾಂಗ್ರೆಸ್ ಪಕ್ಷಕ್ಕಿದೆ. ಇದೀಗ ಹಿಂಭಾಗಿಲಿನ ಮೂಲಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡಿಸುವ ಹಿಂದಿರುವ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. 

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್ ,ಕಿಶನ್ ಹೆಗ್ಡೆ ಕೊಳ್ಕೆಬೈಲು ಹರಿಪ್ರಸಾದ್ ರೈ , ಹೆಬ್ರಿ ಮಂಜುನಾಥ್ ಪೂಜಾರಿ, ಸರ್ಫುದ್ದೀನ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article