ಕಟಪಾಡಿ ಓವರ್ ಪಾಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಗುರ್ಮೆ, ಸಂಸದ ಕೋಟ
Tuesday, April 07, 2026
ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಎಪ್ರಿಲ್ 10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಯೋಗೀಶ್, ಹರ್ಷಿತ್, ರತ್ನಾಕರ್, ಕುರ್ಕಾಲು ಗ್ರಾಮ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಪೂಜಾರಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
