-->
ಯುವತಿ ನಾಪತ್ತೆ: ಪ್ರಕರಣ ದಾಖಲು

ಯುವತಿ ನಾಪತ್ತೆ: ಪ್ರಕರಣ ದಾಖಲು


ಮೂಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ ಮುಸ್ಕಾನ್ (24) ಅವರು ಏಪ್ರಿಲ್ 8ರಂದು ನಾಪತ್ತೆಯಾಗಿರುವ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಾಪತ್ತೆಯಾದ ಯುವತಿಯ ಚಹರೆ: ಎತ್ತರ ಸುಮಾರು 5 ಅಡಿ, ದುಂಡು ಮುಖ, ಕಪ್ಪು ಉದ್ದ ತಲೆ ಕೂದಲು ಹೊಂದಿದ್ದು, ಕುತ್ತಿಗೆಯಲ್ಲಿ ಕಪ್ಪು ಎಳ್ಳು ಮಚ್ಚೆ ಇದೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುವರು. ಕಾಣೆಯಾದ ದಿನ ನೀಲಿ ಬಣ್ಣದ ಚೂಡಿದಾರ ಧರಿಸಿದ್ದರು. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮೂಲ್ಕಿ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. 

Ads on article

Advertise in articles 1

advertising articles 2

Advertise under the article