-->
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ


ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿ(ಯು) ನೇತೃತ್ವದ ಸರ್ಕಾರವನ್ನು ಮುನ್ನಡೆಸುತ್ತಿದ್ದ ಅವರು, ಸಂಪುಟ ಸಭೆಯ ನಂತರ ರಾಜೀನಾಮೆ ಸಲ್ಲಿಸಿದರು. 

ಕಳೆದ ವಾರ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಸುಮಾರು ಎರಡು ದಶಕಗಳ ತಮ್ಮ ಆಡಳಿತಾವಧಿಗೆ ತೆರೆ ಎಳೆದಿದ್ದಾರೆ. 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿದೆ. ಇದೀಗ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದು ರಾಜ್ಯದಲ್ಲಿ ಬಿಜೆಪಿಗೆ ಮೊದಲ ಸಿಎಂ ಸ್ಥಾನವಾಗಲಿದೆ.

Ads on article

Advertise in articles 1

advertising articles 2

Advertise under the article