ಬೈಕ್ ಗಳ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ
Saturday, April 18, 2026
ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಪುತ್ತೂರು ನಗರದ ಪಡೀಲ್ ಎಂಬಲ್ಲಿ ನಡೆದಿದೆ.
ಓರ್ವ ಸವಾರ ರಾಂಗ್ ಸೈಡ್ ನಲ್ಲಿ ಬೈಕ್ ಚಲಾಯಿಸಿದ್ದರಿಂದ ಮತ್ತೊಂದು ಬೈಕ್ ಸವಾರನ ನಿಯಂತ್ರಣ ತಪ್ಪಿ ಪರಸ್ಪರ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ತೀವ್ರತೆಗೆ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟ ಯುವಕನ ಬಗ್ಗೆ ಗಾಯಾಳುವಿನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.