ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
Thursday, April 16, 2026
ಉಡುಪಿಯ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕ 1 & 2ರ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ರೋಹಿತ್ ಎಸ್. ಅಮಿನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮಕ್ಕೆ ಉಪ ಪ್ರಾಂಶುಪಾಲರಾದ ಡಾ. ಪ್ರೀತಿ ಹರೀಶ್ ರಾಜ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಜಯಮೋಲ್, ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳಾದ ಡಾ. ನವೀನ್ ಚಂದ್ರ ಸಿ.ಬಿ ಹಾಗೂ ಅಮೋಘ ಸರ್, ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಸಮೀರ್, ಅಂಕಿತ ಮತ್ತು ರಕ್ಷಿತಾ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು .