ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ
Thursday, April 23, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಪ್ರಕಟಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನು ಪಡೆದಿದೆ.
ಸುಮಾರು 8.6 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ಮೂಲಕ ವೀಕ್ಷಿಸಬಹುದು karresults.nic.in ಅಥವ kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ SSLC ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಗೆ ಒಟ್ಟು 8,65,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 7,75,979 ಮಂದಿ ಹೊಸಬರು (ಪ್ರಥಮ ಬಾರಿ ಪರೀಕ್ಷೆ ಬರೆಯುವವರು) ಆಗಿದ್ದು, 62,938 ಪುನಾವರ್ತಿತ ವಿದ್ಯಾರ್ಥಿಗಳು ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ SSLC ಪರೀಕ್ಷೆಗಳು ನಡೆದಿವೆ.