-->
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್


ಇತ್ತೀಚೆಗೆ ಕಾರ್ಕಳದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಶನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮಾ.22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಪತ್ನಿ ಸೌಮ್ಯ ಶೆಟ್ಟಿಯೇ ಕಾರಣ ಎಂದು ಮೃತರ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಸೌಮ್ಯ ಶೆಟ್ಟಿಯನ್ನು ಏ.11ರಂದು ಉಡುಪಿಯಲ್ಲಿ ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಅವರು ಉಡುಪಿ ಸೆಶನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ಗಂಭೀರತೆ ಪರಿಗಣಿಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.  ಈ ಪ್ರಕರಣದ ತನಿಖೆಯನ್ನು ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ವಾದ ಮಂಡಿಸಿದರು.

Ads on article

Advertise in articles 1

advertising articles 2

Advertise under the article