ಮಣಿಪಾಲದ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ
Monday, April 20, 2026
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಅಪಾರ ನಷ್ಟ ಉಂಟಾಗಿದೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟಕದಲ್ಲಿ ವೆಲ್ಡಿಂಗ್ ಮಾಡುತ್ತಿರುವ ವೇಳೆ ಅದರ ಬೆಂಕಿಯ ಕಿಡಿ ಅಲ್ಲೆ ಸಮೀಪದಲ್ಲಿದ್ದ ಆಯಿಲ್ ಗೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಬೆಂಕಿ ಅಲ್ಲಿನ ಬಾಯ್ಲರ್ ಗೂ ವಿಸ್ತರಿಸಿತು. ಕೂಡಲೇ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದವರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.

