ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ರವಿವಾರ ಕೊಡವೂರು ಶಂಕರನಾರಯಾಣ ದೇಗುಲದವಸಂತ ಮಂಟಪದ ಜರಗಿತು.
ಉದ್ಯಮಿ ಅಧ್ಯಕ್ಷ ಸಾಧು ಸಾಲ್ಯಾನ್ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಮಹಾ ರುದ್ರಯಾಗವು ನಡೆಯುವುದು ಅತ್ಯಂತ ವಿರಳ. ಈ ರುದ್ರಯಾಗದ ಜತೆಗೆ ಬಡಜನರಿಗೆ ಆರೋಗ್ಯ ಸೇವೆ ಮತ್ತು ಉದ್ಯೋಗವನ್ನು ಕಲ್ಪಿಸುವ ಮಹತ್ಕಾರ್ಯವನ್ನು ಮಾಡಲಾಗುತ್ತದೆ.
ಕ್ರೀಡಾಕೂಟ, ವಸ್ತು ಪ್ರದರ್ಶನ, ಪ್ರಸಿದ್ದ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ. ಸುಮಾರು 40 ಸಾವಿರ ಜನರಿಗೆ ಆಮಂತ್ರಣ ಪತ್ರಿಕೆಯನ್ನು ವಿತರಿಸಲಾಗುತ್ತದೆ. ಮೇ 1೪ರಿಂದ 5 ದಿನಗಳ ಕಾಲ ಅನ್ನಸಂತರ್ಪಣೆ ಇದೆ, ವಿಶೇಷವಾಗಿ 5ಸಾವಿರ ಮಹಿಳೆಯರಿಗೆ ಮಹಾ ರುದ್ರಯಾಗ ಸಂಕಲ್ಪದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾದವ ಪೂಜಾರಿ ಬನ್ನಂಜೆ, ಉಪ್ಪೂರು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸುವರ್ಣ, ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಬೆಳ್ಕಳೆ, ನಗರಸಭಾ ಮಾಜಿ ಸದಸ್ಯ ವಿಜಯ ಕೊಡವೂರು, ಡೆಂಟಾಕೇರ್‌ನ ಡಾ| ವಿಜಯೇಂದ್ರ ವಸಂತ್, ಭಜನಾ ಸಂಚಾಲಕ ಧನಂಜಯ ಕಾಂಚ್ನ್, ದೇವಳದ ವ್ಯವಸ್ಥಾಪಾನಾ ಸಮತಿಯ ಸದಸ್ಯರಾದ ವಾದಿರಾಜ್ ಸಾಲ್ಯಾನ್ , ರಾಜ ಸೇರಿಗಾರ, ಶೀಲ ಕೃಷ್ಣ ದೇವಾಡಿಗ, ಭಾಸ್ಕರ ಪಾಲನ್ ಬಾಚನಬೈಲು , ಕೆ. ಬಾಬು ಮೊದಲಾದವರು ಪಾಲ್ಗೊಂಡಿದ್ದರು.
ವ್ಯವಸ್ಥಾನಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ಸೇವಾ ಸಮಿತಿಯ ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು.