-->
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸವಾರ ಸಾವು, ಸಹ ಸವಾರೆ ಗಂಭೀರ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸವಾರ ಸಾವು, ಸಹ ಸವಾರೆ ಗಂಭೀರ


ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ನಡೆದಿದೆ.

ಕಾರ್ತಿಕ್ (23) ಮೃತಪಟ್ಟವರು. ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

 ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Ads on article

Advertise in articles 1

advertising articles 2

Advertise under the article