ಬೈಕ್ ಕಳವು ಪ್ರಕರಣ: ಓರ್ವ ಆರೋಪಿಯ ಬಂಧನ
Monday, April 27, 2026
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ. ಈತ ಎ.18ರಂದು ಪಡುಬಿದ್ರಿ ಶ್ರೀನಾರಾಯಣ ಗುರು ಮಂದಿರದ ಬಳಿ ಮುಲ್ಕಿ ಕಾರ್ನಾಡಿನ ನಿವಾಸಿ ವಾಸುದೇವ ಶೆಟ್ಟಿಗಾರ್ ಎಂಬವರು ನಿಲ್ಲಿಸಿದ ಬೈಕ್ನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಎಸ್ಸೈಗಳಾದ ಸಕ್ತಿವೇಲು ಈ. ಮತ್ತು ಅನಿಲ್ ಕುಮಾರ್ ಟಿ.ನಾಯಕ್ ನೇತೃತ್ವದ ವಿಶೇಷ ತಂಡ ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಕಳವು ಮಾಡಿದ 20,000 ರೂ. ಮೌಲ್ಯದ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಎಎಸ್ಸೈ ರಾಜೇಶ್ ಪಿ., ಕೃಷ್ಣಪ್ರಸಾದ್, ಅಶ್ವಿನ್ ಕುಮಾರ್, ಸಂದೇಶ್ ಭಂಡಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.