ರೌಡಿ ಆಸಾಮಿ ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ
Saturday, April 04, 2026
ಉಡುಪಿ ಜಿಲ್ಲೆಯ ಕಾರ್ಕಳದ ಕೌಡೂರು ಗ್ರಾಮದ ನಿವಾಸಿ ರೌಡಿ ಅಸಾಮಿಯನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಗಣೇಶ್ ಪೂಜಾರಿ (48) ಬಂಧಿತ ಆರೋಪಿ.
ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ರೌಡಿ ಆಸಾಮಿ ಗಣೇಶ್ ಪೂಜಾರಿ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿಯವರು ಹಾಗೂ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಆರೋಪಿ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ-4, ದರೋಡೆ-1, ಹಲ್ಲೆ-3, ಅಕ್ರಮ ಕೂಟ-1, ಜೂಜಾಟ-1 ಹಾಗೂ 1 – ಇತರ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ. ಅವುಗಳ ಪೈಕಿ 1 - ಪ್ರಕರಣ ಸಜೆ, 7 - ಪ್ರಕರಣಗಳು ಖುಲಾಸೆ, 1 - ಪ್ರಕರಣ ನ್ಯಾಯಾಂಗ ವಿಚಾರಣೆ, ಉಳಿದ 2 ಪ್ರಕರಣಗಳು ತನಿಖೆಯಲ್ಲಿರುತ್ತದೆ.
ಬಂಧಿತ ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.