-->
ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಮೋಹನ್ ಚಂದರ್ ನಿಧನ

ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಮೋಹನ್ ಚಂದರ್ ನಿಧನ


ಮಂಗಳೂರಿನ ನಂತೂರು ತಾರಾಯಿತೋಟ ಎಂಬಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಧರ್ಮಸ್ಥಳ ಮೂಲದ  ಗೋಪಾಲಕೃಷ್ಣ (27) ಎಂಬಾತ ಅತಿವೇಗದಿಂದ ಚಲಾಯಿಸುತ್ತಿದ್ದ ಬೈಕ್ ಮೋಹನ್ ಚಂದರ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೋಪಾಲಕೃಷ್ಣ ಟಿಪ್ಪರ್‌ಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರೆ, ರಸ್ತೆಗೆ ಎಸೆಯಲ್ಪಟ್ಟ ಮೋಹನ್ ಚಂದರ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಅಪಘಾತದ ದೃಶ್ಯವು ಟೆಂಪೋ ಒಂದರ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಟೆಂಪೋ ಚಾಲಕ ಗಂಗಾಧರ್ ಅವರು ತಕ್ಷಣ ಮೋಹನ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೋಹನ್ ಚಂದರ್ ಅವರು ಕೊನೆಯುಸಿರೆಳೆದಿದ್ದಾರೆ.  

Ads on article

Advertise in articles 1

advertising articles 2

Advertise under the article