-->
ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕಾಡಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕಾಡಿನಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ


ಮೂರು ದಿನಗಳಿಂದ ನಾಪತ್ತೆಯಾಗಿದ್ದ ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಅವರು ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ಕೃಷಿಕರಾಗಿದ್ದ ಸಜೀವ ಅವರು ಶನಿವಾರ ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಮನೆಯಿಂದ ಹೊರಗೆ ತೆರಳಿದ್ದರು. ಆದರೆ ರಾತ್ರಿಯಾದರೂ ಅವರು ಮನೆಗೆ ಮರಳದಿದ್ದಾಗ ಮನೆ ಮಂದಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ಪೆರಿಯಶಾಂತಿ ಮತ್ತು ಇಚಿಲಂಪಾಡಿ ಸಂಪರ್ಕಿಸುವ ರಸ್ತೆಯ ಬದಿಯಲ್ಲಿ ಅವರ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ಕಾಡಿನಲ್ಲಿ ಮರವೊಂದರ ಬುಡದಲ್ಲಿ ಮೃತದೇಹ ಪತ್ತೆಯಾಗಿದೆ. ಸಮೀಪದಲ್ಲೇ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ನೆಲ್ಯಾಡಿ ಹೊರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Ads on article

Advertise in articles 1

advertising articles 2

Advertise under the article