-->
ಬಸ್- ಲಾರಿ ಮುಖಾಮುಖಿ ಡಿಕ್ಕಿ: ಬಸ್ ಚಾಲಕನಿಗೆ ಗಂಭೀರ ಗಾಯ

ಬಸ್- ಲಾರಿ ಮುಖಾಮುಖಿ ಡಿಕ್ಕಿ: ಬಸ್ ಚಾಲಕನಿಗೆ ಗಂಭೀರ ಗಾಯ


ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಗುರುಪುರ ಕೈಕಂಬ ಪ್ರದೇಶದಲ್ಲಿ ನಡೆದಿದೆ. 

ವಿರುದ್ಧ ದಿಕ್ಕಿನಿಂದ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ಕಾಲು ಮುರಿದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ.

ಘಟನೆಯಿಂದಾಗಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಬಜ್ಪೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಧಾರಿಸಲು ಕ್ರಮ ಕೈಗೊಂಡಿದ್ದಾರೆ.



Ads on article

Advertise in articles 1

advertising articles 2

Advertise under the article