-->
 ಹೆಲ್ಮೆಟ್ ಧರಿಸಿ ಕಾಣಿಕೆ ಹುಂಡಿ ಕಳವುಗೈದ ಆರೋಪಿಗಳ ಬಂಧನ

ಹೆಲ್ಮೆಟ್ ಧರಿಸಿ ಕಾಣಿಕೆ ಹುಂಡಿ ಕಳವುಗೈದ ಆರೋಪಿಗಳ ಬಂಧನ


ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ. 20 ರಂದು ಬೆಳಿಗ್ಗೆ 7:56 ಗಂಟೆ ಸುಮಾರಿಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು  ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಸಂದೀಪ ಆಚಾರಿ (28) ಹಾಗೂ ಮುತ್ತಪ್ಪ ಶರಣಪ್ಪ ವಾಲಿಕರ್ (40) ಅವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಲಾಗಿದೆ. 

ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೋರ್ವ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಎ ಕಾಯ್ಕಣಿ ಅವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ, ಐ.ಆರ್ ಗಡ್ಡೇಕರ್ ಹಾಗೂ ಪಿ.ಎಸ್.ಐ ಅಕ್ಷಯ ಕುಮಾರಿ ಎಸ್.ಎನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಚಿನ್ ಶೆಟ್ಟಿ, ಜಯರಾಮ ನಾಯ್ಕ್, ಚೇತನ್ ಕುಮಾರ್, ನವೀನ್ ನಾಯ್ಕ್ ಹಾಗೂ ಕುಂದಾಪುರ ಗ್ರಾಮಾಂತರ ಠಾಣೆಯ ಮೌನೇಶ್ ನಾಯ್ಕ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ದಿನೇಶ್ ಅವರ ತಂಡ ಕಾರ್ಯಾಚರಣೆ ನಡೆಸಿದ್ದರು.ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, ಮೂರು ಮೊಬೈಲ್ ಫೋನ್‌ಗಳು ಹಾಗೂ ಕಳವುಗೊಳಗಾದ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯವು ಸುಮಾರು ₹1,50,000 ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನ ವಿದಿಸಿದೆ.




Ads on article

Advertise in articles 1

advertising articles 2

Advertise under the article