-->
ನಾಗರಮಠದಲ್ಲಿಅವೈಜ್ಞಾನಿಕ ಮರಳುಗಾರಿಕೆ: ಜಿಲ್ಲಾಡಳಿತದ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ(Video)

ನಾಗರಮಠದಲ್ಲಿಅವೈಜ್ಞಾನಿಕ ಮರಳುಗಾರಿಕೆ: ಜಿಲ್ಲಾಡಳಿತದ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ(Video)


ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ನಾಗರಮಠ ಎಂಬಲ್ಲಿ ಸೀತಾನದಿ ಪಾತ್ರದಲ್ಲಿ ಅವೈಜ್ಞಾನಿಕ ಮರಳುಗಾರಿಕೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ಆರೋಪಿಸಿ ಇಂದು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.  


ನಾಗರಮಠದ ಸೀತಾನದಿ ತಟದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಆಕೋಶ ವ್ಯಕ್ತಪಡಿಸಿದರು. ನಾಗರಮಠ ಎಂಬಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. 

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ ದಿನೇಶ್ ಗಾಣಿಗ, ಒಂದೂವರೆ ಲಕ್ಷಕ್ಕೂ ಅಧಿಕ ಮೆಟ್ರಿಕ್ ಟನ್ ಮರಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಸುಮಾರು ಹತು ದಿನದ ಹಿಂದೆ ಶಾಸಕರು ಹಾಗೂ ಸಂಸದರ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದಾಖಲೆ ಸಮೇತ ಮನವಿ ನೀಡಿದ್ದಾರೆ. ಜಿಲ್ಲಾದಹಿಕಾರಿಗಳು ಈ ಮನವಿಗೆ ಸ್ಪಂಧಿಸಿಲ್ಲ. ದುರಹಂಕಾರದಿಂದ ವರ್ತಿಸುತ್ತಾರೆ. ಗ್ರಾಮಸ್ಥರು ಅವೈಜ್ಞಾನಿಕ ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿದರೆ, ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಕೇಸು ದಾಖಲಿಸುತ್ತಾರೆ. ಜಿಲ್ಲಾಡಳಿತದ ಈ ಯಾವ ಬೆದರಿಕೆಗಳಿಗೂ ನಾವು ಬಗ್ಗುವುದಿಲ್ಲ. ಮುಂದಿನ ದಿನಗಳಲ್ಲಿ ಕಾನೂನು ರೀತಿಯ ಹೋರಾಟ ಮಾಡುವುದಾಗಿ ಎಚ್ಚರಿಸಿದರು.  

ಪ್ರತಿಭಟನೆಯಲ್ಲಿ ಚಂದ್ರ ಕಾಂಚನ್, ಕೃಷ್ಣ ಬಂಗೇರಾ, ಗಿರಿಜಾ ರಂಗ ಮರಕಾಲ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. 

 




Ads on article

Advertise in articles 1

advertising articles 2

Advertise under the article