-->
2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್‌ಬಿಡಬ್ಲ್ಯು ವಾರಂಟ್‌ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆ ನಿವಾಸಿಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ಮೂರು ಎನ್‌ಬಿಡಬ್ಲ್ಯು ವಾರಂಟ್‌ಗಳು ಬಾಕಿ ಇದ್ದವು. 

ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 74/2017 ಕಲಂ : 380, 411 ಐಪಿಸಿ, ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 68/2018 ಕಲಂ : 379, 411 ಐಪಿಸಿ ಹಾಗೂ 4, 5, 7, 8, 9, 11, 12 ಗೋಹತ್ಯೆ ನಿಷೇಧ ಕಾಯ್ದೆ, ಕಂಕನಾಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 149/2017 ಕಲಂ : 379, 411 ಐಪಿಸಿ ಹಾಗೂ 4, 5, 7, 8, 9, 11, 12 ಗೋಹತ್ಯೆ ನಿಷೇಧ ಕಾಯ್ದೆ  ಪ್ರಕರಣಗಳಲ್ಲಿ ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಬಳಿಕ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Ads on article

Advertise in articles 1

advertising articles 2

Advertise under the article