-->
ಮೇ 24- 26: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಡುಪಿ ಪ್ರವಾಸ

ಮೇ 24- 26: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಡುಪಿ ಪ್ರವಾಸ


ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮೇ 24ರಿಂದ 26ರವರೆಗೆ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 24ರಂದು ಬೆಳಗ್ಗೆ 10:30ಕ್ಕೆ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣ ದಲ್ಲಿ ಸ್ಥಳೀಯ ಕಾರ್ಯಕ್ರಮ, ಅಪರಾಹ್ನ 12:45ಕ್ಕೆ ಉಡುಪಿಯ ಅಯ್ಯಪ್ಪ ನಗರದಲ್ಲಿರುವ ಶ್ರೀಗುರು ರಾಘವೇಂದ್ರ ಸೇವಾ ಟ್ರಸ್ಟ್‌ನ ವಿಜೇತ ವಿಶೇಷ ವಸತಿ ಶಾಲೆಗೆ ಭೇಟಿ, 3:30ಕ್ಕೆ ಕುಂದಾಪುರ ತಾಲೂಕು ತೆಕ್ಕಟ್ಟೆಯ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಮಹಿಳಾ ಸ್ಪಂದನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 5:30ಕ್ಕೆ ಉಡುಪಿ ಬನ್ನಂಜೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ಬಳಿಕ ಉಡುಪಿಯಲ್ಲಿ ವಾಸ್ತವ್ಯ. ಮೇ 25ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ, 11 ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ ಪೋಶ್ ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟನೆ, ಅಪರಾಹ್ನ 12:00ಕ್ಕೆ ಅಜ್ಜರಕಾಡಿನ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಂವಾದ, 3:30ಕ್ಕೆ ಮಿಷನ್ ಕಂಪೌಂಡ್ ಬಳಿ ಇರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ, ಸಂಜೆ 5 ಗಂಟೆಗೆ ಬನ್ನಂಜೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯಕ್ಕೆ ಭೇಟಿ ಬಳಿಕ ವಾಸ್ತವ್ಯ ಹೂಡಲಿದ್ದಾರೆ. 

ಮೇ 26ರಂದು ಬೆಳಗ್ಗೆ 9:15ಕ್ಕೆ ಬ್ರಹ್ಮಾವರದಲ್ಲಿರುವ ಗೋಡಂಬಿ ತಯಾರಿಸುವ ಶ್ರೀಕೃಷ್ಣಪ್ರಸಾದ್ ಆಗ್ರೋ ಇಂಡಸ್ಟ್ರೀಸ್‌ಗೆ ಭೇಟಿ, 11 ಗಂಟೆಗೆ ಮಣಿಪಾಲದಲ್ಲಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ. ಬಳಿಕ ಮಂಗಳೂರಿಗೆ ತೆರಳಿ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. 

Ads on article

Advertise in articles 1

advertising articles 2

Advertise under the article