-->
ಕಪ್ಪೆಚಿಪ್ಪು ಹೆಕ್ಕಲು ಹೋಗಿದ್ದ 8 ಮಂದಿಯ ದಾರುಣ ಅಂತ್ಯ

ಕಪ್ಪೆಚಿಪ್ಪು ಹೆಕ್ಕಲು ಹೋಗಿದ್ದ 8 ಮಂದಿಯ ದಾರುಣ ಅಂತ್ಯ


ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 8 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ತಟ್ಟಿಹಕ್ಕಲ ಎಂಬಲ್ಲಿ ನಡೆದಿದೆ. 

ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಗುರುತಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಭಾನುವಾರ ರಜಾದಿನವಾಗಿದ್ದರಿಂದ 14 ಜನ ಸೇರಿ ಕಪ್ಪೆಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದರು. ನೀರಿನ ಹರಿವು ಹಾಗೂ ಆಳ ಅರಿಯದೇ ನದಿಗೆ ಇಳಿದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮೀನುಗಾರರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಿದ್ದಾರೆ. 8 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ.

ಸಾವನ್ನಪ್ಪಿದ ಎಂಟು ಜನರಲ್ಲಿ ಒರ್ವ ಪುರುಷ 7 ಜನ ಮಹಿಳೆಯರು ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿರುವ ಇಬ್ಬರ  ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.

Ads on article

Advertise in articles 1

advertising articles 2

Advertise under the article