ಯಕ್ಷಗಾನ ಕಲಾರಂಗದ 93ನೇ ಮನೆ ‘ಪ್ರತಿಭಾ ನಿಲಯ’ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಜನಿ ಇವಳಿಗೆ ಬ್ರಹ್ಮಾವರ ತಾಲೂಕಿನ ವಡ್ಡರ್ಸೆಯಲ್ಲಿ ದಯಾಶಂಕರ ಶೆಟ್ಟಿ ಮತ್ತು ಪ್ರತಿಭಾ ಶೆಟ್ಟಿ ಇವರ ಗೌರವಾರ್ಥ ಮುಂಬೈಯ ವಿಂಡ್ಸರ್ ರೆಫ್ರೆಕ್ಟರೀಸ್ ಪ್ರೈ.ಲಿ. ಸಂಸ್ಥೆಯ ಸಿಇಒ ಪ್ರಜ್ಞಾ ಶೆಟ್ಟಿ ಇವರು ಸಂಸ್ಥೆಯ ವತಿಯಿಂದ ನಿರ್ಮಿಸಿದ ನೂತನ ಮನೆ ‘ಪ್ರತಿಭಾ ನಿಲಯ’ವನ್ನು ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಿ ಹಸ್ತಾಂತರಿಸಿದರು.
ಬಸವ ಪೂಜಾರಿ ಹಾಗೂ ಸರಸ್ವತಿ ದಂಪತಿಯ ಪುತ್ರಿಯಾದ ಸಜನಿ ಎಸೆಸೆಲ್ಸಿಯಲ್ಲಿ ಶೇ.98 ಹಾಗೂ ಪಿಯುಸಿ ಮೊದಲ ವರ್ಷದಲ್ಲಿ ಶೇ.97 ರಷ್ಟು ಅಂಕ ಗಳಿಸಿದ್ದಳು.ನಿವೃತ್ತ ಪ್ರಾಧ್ಯಾಪಕ ಉಪೇಂದ್ರ ಸೋಮಯಾಜಿ ಮಾತನಾಡಿ ಯಕ್ಷಗಾನ ಕಲಾರಂಗ ಎಂಬುದು ಸುಮನಸರ ಕೂಟ ಅವರ ಸಮಾಜ ಪರ ಕಾಳಜಿ ಅನನ್ಯ. ಈ ಕಾಲದಲ್ಲಿ ಇಂತಹ ಒಂದು ಸಂಘಟನೆ ಇದೆ ಎಂಬುದೇ ನಾಡಿನ ಹೆಮ್ಮೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಉಡುಪಿಯ ಮಾಜಿ ಲಯನ್ಸ್ ಗವರ್ನರ್ ವಿ. ಜಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಕೀಲರ ಸಂಘದ ಮಾಜಿ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಚನ್ನರಾಯಪಟ್ಟಣದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರುಣಾ ಸೋಮನಾಥ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ವೇದಿಕೆಯಲ್ಲಿ ಪ್ರಾಂಶುಪಾಲ ಜಗದೀಶ ನಾವುಡ, ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಬಿ. ಜಗದೀಶ ಶೆಟ್ಟಿ, ಭರತ್ ಶೆಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಪಿ. ಕಿಶನ್ ಹೆಗ್ಡೆ, ಯು.ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ವಿಷ್ಣುಮೂರ್ತಿ ಭಟ್ ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಪ್ರೊ. ಕೆ. ಸದಾಶಿವ ರಾವ್, ವಿದ್ಯಾಪ್ರಸಾದ್, ಸದಸ್ಯರಾದ ಭುವನಪ್ರಸಾದ ಹೆಗ್ಡೆ, ಅನಂತರಾಜ ಉಪಾಧ್ಯ, ಹಿರಿಯಣ್ಣ ಕಿದಿಯೂರ್, ಜಯರಾಮ ಪಡಿಯಾರ್, ಎಚ್. ಎನ್. ವೆಂಕಟೇಶ್, ಗಣೇಶ ಬ್ರಹ್ಮಾವರ, ಸನಕ ಕಡೆಕಾರ್ ಪಾಲ್ಗೊಂಡಿದ್ದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.