ಟಿ.ಡಿ. ರಾಜೇಗೌಡಗೆ ಬಿಗ್ ರಿಲೀಫ್: ಶೃಂಗೇರಿ ಮರು ಮತ ಎಣಿಕೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
Monday, May 11, 2026
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶ ಹಾಗೂ ಆ ಬಳಿಕ ಬಿಜೆಪಿ ಅಭ್ಯರ್ಥಿ ಜೀವರಾಜ್ ವಿಜಯಿ ಎಂದು ಪ್ರಕಟಿಸಿದ ಚುನಾವಣಾಧಿಕಾರಿಗಳ ಕ್ರಮಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ಆದೇಶಕ್ಕೆ ಮೊದಲಿನ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ.
ಇದರಿಂದ ಕಾಂಗ್ರೆಸ್ಸಿನ ಶಾಸಕರಾಗಿದ್ದ ಟಿ.ಡಿ. ರಾಜೇಗೌಡ ಅವರಿಗೆ ಬಿಗ್ ಬ್ರೇಕ್ ದೊರೆತಂತಾಗಿದೆ.
ಅಂಚೆ ಮತಗಳ ಮರು ಎಣಿಕೆ ಪ್ರಶ್ನಿಸಿ ಶಾಸಕರಾಗಿದ್ದ ಟಿ.ಡಿ. ರಾಜೇಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ಈ ತಡೆಯಾಜ್ಞೆ ನೀಡಿದ್ದು, ಟಿ.ಡಿ. ರಾಜೇಗೌಡ ಅವರೇ ಶಾಸಕರಾಗಿ ಮುಂದುವರಿಯುತ್ತಾರೆಂದು ಸ್ಪಷ್ಟಪಡಿಸಿದೆ.