ಪ. ಬಂಗಾಲ: ಚುನಾವಣಾಧಿಕಾರಿಯೇ ಈಗ ಸರಕಾರದ ಪ್ರಧಾನ ಕಾರ್ಯದರ್ಶಿ
Tuesday, May 12, 2026
ಮೊನ್ನೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮನೋಜ್ ಅಗರ್ವಾಲ್ ಅವರನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ರಾಜ್ಯ ಬಿಜೆಪಿ ಸರಕಾರದ ಈ ಕ್ರಮವನ್ನು ವಿಪಕ್ಷ ಟಿಎಂಸಿ ತೀವ್ರವಾಗಿ ಖಂಡಿಸಿದ್ದು, ಆಕ್ಷೇಪ ವ್ಯಕ್ತಪಡಿಸಿದೆ.
ಇದು ನಾಚಿಕೆಗೇಡು ಮಾತ್ರವಲ್ಲ ಅದನ್ನೂ ಮೀರಿದ ನಡೆ’ (beyond shameless) ಎಂದು ಟಿಎಂಸಿಯ ಸಾಕೇತ್ ಗೋಖಲೆ ಟೀಕಿಸಿದ್ದು, ‘ಚುನಾವಣೆನ್ನೇ ಕಳವು ಮಾಡಿರುವುದನ್ನು ಬಿಜೆಪಿ ಮತ್ತು ಚುನಾವಣಾ ಆಯೋಗ ನೇರವಾಗಿ ಒಪ್ಪಿಕೊಂಡಂತಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ. “ನಮ್ಮ ನ್ಯಾಯಾಲಯಗಳೂ ಕುರುಡಾಗಿವೆಯೇ” ಎಂದೂ ಅವರು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳ ಕೇಡರ್‌ನ 1990ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅಗರ್ವಾಲ್, ಪ. ಬಂಗಾಲದ ಚುನಾವಣೆ ನಡೆಸುವ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು.