-->
ನೀಟ್ ಯುಜಿ ಪರೀಕ್ಷೆ ರದ್ದು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕೃತ ಘೋಷಣೆ

ನೀಟ್ ಯುಜಿ ಪರೀಕ್ಷೆ ರದ್ದು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕೃತ ಘೋಷಣೆ


ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಯುಜಿ (NEET UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕೃತವಾಗಿ ರದ್ದುಗೊಳಿಸಿದೆ.

ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.

ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ 2026 ಅನ್ನು 'ಗೆಸ್ ಪತ್ರಿಕೆ' ಸೋರಿಕೆ ಆರೋಪದ ನಂತರ ರದ್ದುಪಡಿಸಲಾಗಿದೆ. ಮೇ 3 ರಂದು ನಡೆದ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್‌ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು. 

Ads on article

Advertise in articles 1

advertising articles 2

Advertise under the article