-->
ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು

ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು


ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು  ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಯ ಪುತ್ರಿ ರಮ (19) ಮೃತ ಯುವತಿ. ಈಕೆ ಎ. 19 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಧಿಸಿದಂತೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article