ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ಮೆಲ್ವಿನ್ ಮೆಂಡೋನ್ಸಾ ಅಧಿಕಾರ ಸ್ವೀಕಾರ
Thursday, May 07, 2026
ಉಡುಪಿಯ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಮೆಲ್ವಿನ್ ಮೆಂಡೋನ್ಸಾ ಎಸ್.ಜೆ. ಅಧಿಕಾರ ಸ್ವೀಕರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್ ನೂತನ ಪ್ರಾಂಶುಪಾಲರನ್ನು ಅಭಿನಂದಿಸಿ ಶುಭ ಹಾರೈಸಿದರು. ಮೆಲ್ವಿನ್ ಮೆಂಡೋನ್ಸಾ ಮಂಗಳೂರಿನ ಸಂತ ಅಲೋಶಿಯಸ್ ಪಿಯು ಕಾಲೇಜು ಮತ್ತು ಬೆಂಗಳೂರಿನ ಸಂತ ಜೋಸೆಫ್ ಪಿಯು ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಳ್ವಾ, ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕಾಲೇಜಿನ ಸಿಬಂದಿಗಳು ಉಪಸ್ಥಿತರಿದ್ದರು.