-->
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್


ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ.

ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ರಾಜೀನಾಮೆ ಪತ್ರವನ್ನ ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು. ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Ads on article

Advertise in articles 1

advertising articles 2

Advertise under the article