-->
 ನಾಳೆ ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯಾ ಉಡುಪಿ ಘಟಕ ಪದಗ್ರಹಣ

ನಾಳೆ ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯಾ ಉಡುಪಿ ಘಟಕ ಪದಗ್ರಹಣ


ಭಾರತ ಸರಕಾರದ ಮಾನ್ಯತೆ ಪಡೆದ ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯ (BAI) ಇದರ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ 19ರಂದು ಮಂಗಳವಾರ ಸಂಜೆ 7 ಗಂಟೆಗೆ ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ಜರುಗಲಿದೆ.  

ಉಡುಪಿ ಶಾಸಕ ಯಶಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಹಾಗೂ ಬಿಲ್ಡರ್ಸ್ ಎಸೋಸಿಯೇಶನ್ ಮೈಸೂರು ಘಟಕದ ಸ್ಥಾಪಕಾಧ್ಯಕ್ಷ ನಾಗರಾಜ್ ವಿ. ಬಾಯರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಸ್. ಶಿವಪ್ರಕಾಶ್ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಲಿರುವರು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಿ. ಪ್ರಸಾದ್ ಶೆಟ್ಟಿ, ಕಾರ್ಯದರ್ಶಿಯಾಗಿ ವರುಣ್ ಶೆಟ್ಟಿ ಕಟಪಾಡಿ, ಕೋಶಾಧಿಕಾರಿಯಾಗಿ ಅಲೆವೂರು ದಿನೇಶ್ ಕಿಣಿ ಹಾಗೂ ಇತರ ಪದಾಧಿಕಾರಿಗಳು ಈ ಸಂದರ್ಭ ಅಧಿಕಾರ ಸ್ವೀಕರಿಸಲಿರುವರು. ಈ ಸಂದರ್ಭದಲ್ಲಿ ಸಾಧಕ ಸದಸ್ಯರನ್ನು ಹಾಗೂ ಪ್ರತಿಭಾನ್ವಿತರನ್ನು ಸನ್ಮಾನಿಸಲಾಗುವುದು. ಮನೋರಂಜನಾ ಕಾರ್ಯಕ್ರಮವಾಗಿ ಖ್ಯಾತ ಕಲಾವಿದ ಮೈಸೂರು ಆನಂದ್ ಅವರಿಂದ ಮಿಮಿಕ್ರಿ ಕಾರ್ಯಕ್ರಮವಿದೆ ಎಂದು ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article